BIG NEWS: ಶಿವಮೊಗ್ಗ: 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ.

ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು.

ಬಳಿಕ ಅವರು ತೀವ್ರ ಕಫದಿಂದ ಬಳಲುತ್ತಿದ್ದರು. ಈ ವೇಳೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ವರದಿಯಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಹಾವೇರಿ ಡಿಹೆಚ್ ಒ ಈ ಪ್ರಕರಣವನ್ನು ಸೂಚಿಸಿದ್ದಾರೆ. ವ್ಯಕ್ತಿ ಹಾವೇರಿ ಜಿಲ್ಲೆಯವರಾಗಿದ್ದರೂ ಅವರಿಗೆ ಕೋವಿಡ್ ಪತ್ತೆಯಾಗಿದ್ದು ಶಿವಮೊಗ್ಗದಲ್ಲಿ ಎನ್ನಲಾಗಿದೆ. ಸದ್ಯ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read