‘ಕಟ್ಟಡ ಕಾರ್ಮಿಕ’ರಿಗೆ ಗುಡ್ ನ್ಯೂಸ್ : ‘ಸಂಚಾರಿ ಆರೋಗ್ಯ ಕ್ಲಿನಿಕ್’ ಗೆ ಸಚಿವ ಸಂತೋಷ ಲಾಡ್ ಚಾಲನೆ

ಧಾರವಾಡ : ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ವಾಹನಗಳನ್ನು ಮಾನ್ಯ ಮುಖ್ಯಮಂತ್ರಿ ಅವರು ಕಳೆದ ತಿಂಗಳು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಧಾರವಾಡ ಜಿಲ್ಲೆಯಲ್ಲಿ ಇಂದು (ಮೇ. 27) ಸಕ್ರ್ಯೂಟ್ ಹೌಸ್ ಆವರಣದಲ್ಲಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ 3 ವಾಹನಗಳನ್ನು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ಕ್ಲೀನಿಕ್ ಸಂಚಾರಿ ವಾಹನಗಳನ್ನು ರೂಪಿಸಲಾಗಿದೆ.
ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣವಾಗುವ ಪ್ರದೇಶಕ್ಕೆ ಹೋಗಿ, ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯಡಿ ಆರೋಗ್ಯ ತಪಾಸಣೆ
ಮಾಡಲಾಗುತ್ತದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣ ಪ್ರದೇಶಗಳಿಗೆ ಹೋಗಿ, ಜ್ವರ, ಕೆಮ್ಮು, ಮಧುಮೇಹ, ರಕ್ತದೊತ್ತಡ, ರಕ್ತ ಪರೀಕ್ಷೆ ಸೇರಿದಂತೆ ಸುಮಾರು 20 ಪ್ಯಾರಾ ಮೀಟರ್ ಗಳ ಅನ್ವಯ ಕಾರ್ಮಿಕರ ಹಾಗೂ ಅವರ ಸಂಭಂದಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ಮತ್ತು ತಪಾಸಣೆ ಕುರಿತ ಅವರ ದಾಖಲೆಗಳು ಆನ್ ಲೈನ್ ಮೂಲಕ ನೇರವಾಗಿ ಕಾರ್ಮಿಕ ಇಲಾಖೆಯ ಮುಖ್ಯ ಕಚೇರಿಗೆ ತಲುಪುತ್ತದೆ ಎಂದು ಅವರು ಹೇಳಿದರು.ಕಾರ್ಮಿಕರ ಅಧಿಕೃತ ದಾಖಲೆಗಳನ್ನು ಅಂತರ್ಜಾಲದ ಮೂಲಕ ದೃಢ ಪಡಿಸಿಕೊಳ್ಳಲಾಗುತ್ತದೆ ಎಂದರು.

ಕಾರ್ಯಾದೇಶ ಪಡೆದಿರುವ ಸಂಸ್ಥೆಗಳು ಪ್ರತಿ ತಿಂಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಸಂಚರಿಸುವ ಮಾರ್ಗ, ಸ್ಥಳದ ಬಗ್ಗೆ ರೂಟ್ ಮ್ಯಾಪ್ನ್ನು ಸಿದ್ಧಪಡಿಸಿ, ಖಾತರಿಪಡಿಸಿಕೊಳ್ಳಬೇಕು. ಪ್ರತಿ ತಿಂಗಳ ರೂಟ್ ಮ್ಯಾಪ್ಗಳನ್ನು ಕನಿಷ್ಠ 15 ದಿನಗಳ ಮುಂಚಿತವಾಗಿ ಸಿದ್ದಪಡಿಸಿ, ವಾಹನಗಳು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ಮಾಡಬೇಕು ಎಂದರು.

ರೂಟ್ ಮ್ಯಾಪ್ ತಯಾರಿಸುವಾಗ ಸಂಸ್ಥೆಯು ಎಲ್ಲಾ ತಾಲ್ಲೂಕುಗಳು ಮತ್ತು ತಾಲ್ಲೂಕಿನ ಎಲ್ಲಾ ಪ್ರದೇಶಗಳು (ಗ್ರಾಮ,ವಾರ್ಡ್,ಹೋಬಳಿ) ಒಳಪಡುವ ರೀತಿ ಕ್ರಮವಹಿಸಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಒಳಪಡುವ ರೀತಿಯಲ್ಲಿ ರೂಟ್ ಮ್ಯಾಪ್ನ್ನು ಸಿದ್ದಪಡಿಸುತ್ತಾರೆ. ರೂಟ್ ಮ್ಯಾಪ್ನ್ನು ಸಿದ್ದಪಡಿಸುವಾಗ ಪ್ರಯಾಣದ ಸಮಯವು ಅತ್ಯಂತ ಕಡಿಮೆ ಇರುವಂತೆ ಹಾಗೂ ನಿಗಧಿತ ಸ್ಥಳದಲ್ಲಿ ಸಂಚಾರಿ ಆರೋಗ್ಯ ಘಟಕಗಳು ಕನಿಷ್ಠ 04 ಗಂಟೆಗಳಾದರೂ ಕಾರ್ಯನಿರ್ವಹಿಸುವುದನ್ನು ಖಾತರಿಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಹೆಚ್ಚಿನ ಸಂಖ್ಯೆಯ ನೋಂದಾಯಿತ ಕಾರ್ಮಿಕರಿಗೆ ಸೌಲಭ್ಯ ಸಿಗುವಂತಹ ಪ್ರದೇಶಗಳಿಗೆ ಹೋಗುವುದು. ಸಂಚಾರಿ ಆರೋಗ್ಯ ಘಟಕಗಳು ಕಾರ್ಯನಿರ್ವಹಿಸು ಸ್ಥಳಗಳಲ್ಲಿ ಶೌಚಾಲಯಗಳು ಇರುವುದನ್ನು ಖಾತರಿಪಡಿಸಿಕೊಳ್ಳುವುದು. ಸದರಿ ಸಂಚಾರಿ ಆರೋಗ್ಯ ಘಟಕಗಳಲ್ಲಿ 25 ವೈದ್ಯಕೀಯ ಉಪಕರಣಗಳು, 05 ಪ್ರಯೋಗಾಲಯದ ಉಪಕರಣಗಳು ಹಾಗೂ 37 ವಿವಿಧ ವೈದ್ಯಕೀಯ ಬಳಕೆ ವಸ್ತುಗಳು (bedsheets consumables) ಇರುತ್ತದೆ. ಈ ಕುರಿತು ಕಾರ್ಮಿಕ ಇಲಾಖೆ ಅಧಿಕಾರಿಗಳು ನಿಗಾ ವಹಿಸುತ್ತಾರೆ ಎಂದು ಅವರು ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಿಇಓ ಭುವನೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ. ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಸಚೀನ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಇತರರು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read