BIG NEWS : ‘KSRTC’ ಗೆ ಮತ್ತಷ್ಟು ಶಕ್ತಿ : ಜೂನ್ ಮೊದಲ ವಾರದಲ್ಲಿ 2000 ನೌಕರರು ಕರ್ತವ್ಯಕ್ಕೆ ಹಾಜರು.!

ಬೆಂಗಳೂರು : ಕೆಎಸ್ಆರ್ಟಿಸಿಯಲ್ಲಿ ಐದು ವರ್ಷಗಳಿಂದ ಬಾಕಿ ಉಳಿದಿದ್ದ ಚಾಲಕ ಕಂ ನಿರ್ವಾಹಕರ ನೇಮಕಾತಿ ಅಂತಿಮ ಹಂತಕ್ಕೆ ಬಂದಿದ್ದು, ಜೂನ್ ಮೊದಲ ವಾರದಲ್ಲಿ 2,000 ಹೊಸ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

‘ಚಾಲನಾ ಪರೀಕ್ಷೆಗೆ ಸಂಬಂಧಿಸಿದಂತೆ ಆಕ್ಷೇಪ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರೀಕ್ಷೆ ಕಠಿಣವಾಗಿತ್ತು ಎಂದು ಕೆಲವರು ಆಕ್ಷೇಪ ಸಲ್ಲಿಸಿದ್ದರು. ಚಾಲನಾ ವೃತ್ತಿ ಆಗಿರುವುದರಿಂದ ಮುಂದೆ ಅವಘಡ ನಡೆಯದಂತೆ ನೋಡಿಕೊಳ್ಳುವುದು ಅಗತ್ಯ. ಅದಕ್ಕಾಗಿ ಪರೀಕ್ಷೆಯಲ್ಲಿ ಚಾಲನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಆದರೂ ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ’ ಎಂದು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read