ಬೆಂಗಳೂರು: ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ. ಕನ್ನಡ ಹುಟ್ಟಿದ್ದು ತಮಿಳುನಿಂದ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.
ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದ ನಟ ಕಮಲ್ ಹಾಸನ್, ಕನ್ನಡದ ಬಗ್ಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ನಟ ಶಿವರಾಜ್ ಕುಮಾರ್ ಎದುರಲ್ಲೇ ಕಮಲ್ ಹಾಸನ್, ಕನ್ನಡದ ಬಗ್ಗೆ ವಿವಾದಾತ್ಮಾ ಹೇಳಿಕೆ ನೀಡಿದ್ದು, ಸಾಮಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ಕಮಲ್ ಹಾಸನ್ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು. ಕನ್ನಡ ಹುಟ್ಟಿದ್ದು, ನಮ್ಮ ತಮಿಳಿನಿಂದ ಎಂದು ಹೇಳಿದ್ದಾರೆ.
ನಟ ಕಮಲ್ ಹಾಸನ್ ವಿರುದ್ಧ ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು. ಕನ್ನಡ ತಮಿಳಿನಿಂದ ಬಂದಿದ್ದಲ್ಲ ಎಂದು ಗುಡುಗಿದ್ದಾರೆ. ಕಮಲ್ ಹೇಳಿಕೆ ತಮಿಳುಗರ ಶ್ರೇಷ್ಠತೆಯ ವ್ಯಸನ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.