ಚಾಮರಾಜನಗರ: ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ನಾಲ್ವರ ಪೈಕಿ ಓರ್ವ ನಾಪತೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ನಂದಕುಮಾರ್ ನಾಪತ್ತೆಯಾದವರು.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ದರ್ಗಾ ಸಮೀಪ ಘಟನೆ ನಡೆದಿದೆ. ಬೆಂಗಳೂರಿನಿಂದ ಖಾಸಗಿ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಕಾವೇರಿ ನದಿಯಲ್ಲಿ ಈಜಲು ಇಳಿದು ಪರದಾಡುತ್ತಿದ್ದ ಬಗ್ಗೆ ಮಾಹಿತಿ ಗೊತ್ತಾಗಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೂವರನ್ನು ರಕ್ಷಣೆ ಮಾಡಿದ್ದಾರೆ.
ತುಷಾರ್, ಪ್ರಮೋದ್, ಪ್ರಫುಲ್ಲಾ ಅವರನ್ನು ರಕ್ಷಣೆ ಮಾಡಲಾಗಿದೆ. ನೀರಿನ ಸೆಳೆತಕ್ಕೆ ಸಿಲುಕಿ ನಂದಕುಮಾರ್ ಕೊಚ್ಚಿ ಹೋಗಿರುವ ಮಾಹಿತಿ ಗೊತ್ತಾಗಿದೆ. ನಂದಕುಮಾರ್ ಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.