ಬೆಂಗಳೂರು: ರಾಜ್ಯದಲ್ಲಿ ಇಂದು 36 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 16 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಂದು ಯಾವುದೇ ಸಾವು ಸಂಭವಿಸಿಲ್ಲ. ರಾಜ್ಯದಲ್ಲಿ 100 ಸಕ್ರಿಯ ಪ್ರಕರಣಗಳು ಇವೆ.
ಇಂದು 381 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 9.44ರಷ್ಟು ಇದೆ. 96 ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
