HomeLatest Newsರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿಯಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನ, ಉತ್ತರ ಒಳನಾಡಿನಲ್ಲಿ ಎರಡು ದಿನ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮೇ 28ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 29 ರಿಂದ 31ರವರೆಗೆ ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಜೂನ್ 1 ಮತ್ತು 2 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಶಿವಮೊಗ್ಗ, ಕೊಡಗು, ಚಿಕಮಗಳೂರು ಜಿಲ್ಲೆಗಳಿಗೆ ಮೇ 31 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮೇ 31ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಚಾಮರಾಜನಗರ ಜಿಲ್ಲೆಗೆ ಮೇ 30, 31 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಮೇ 28ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಯಾದಗಿರಿ ಜಿಲ್ಲೆಗೆ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮೇ 29ರಂದು ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular