HomeLatest Newsಮಹಿಳಾ ಆಯೋಗದ ಅಧ್ಯಕ್ಷೆ ಬಗ್ಗೆ ಅಸಭ್ಯ ಕಾಮೆಂಟ್: ಕಿಡಿಗೇಡಿ ವಿರುದ್ಧ ಕೇಸ್ ದಾಖಲು

ಮಹಿಳಾ ಆಯೋಗದ ಅಧ್ಯಕ್ಷೆ ಬಗ್ಗೆ ಅಸಭ್ಯ ಕಾಮೆಂಟ್: ಕಿಡಿಗೇಡಿ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ ಕಿಡಿಗೇಡಿ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೆಲವು ದಿನಗಳ ಹಿಂದೆ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣವರ್ ಅವರ ಖಾತೆಯಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ಬಗ್ಗೆ ಖಾತೆಯೊಂದರಿಂದ ಅಗೌರವಯುತವಾದ ಕಾಮೆಂಟ್ ಬಂದಿತ್ತು.

ಇದನ್ನು ಗಮನಿಸಿದ ನಾಗಲಕ್ಷ್ಮಿ ಚೌಧರಿ ಅವರ ಸಂಬಂಧಿ ಜಗದೀಶ್ ಅವರು ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಇನ್ಸ್ಟಾಗ್ರಾಂ ಖಾತೆಯ ಮಾಹಿತಿ ಪಡೆಯಲು ಸೈಬರ್ ತಜ್ಞರ ನೆರವು ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular