HomeLatest NewsGOOD NEWS : 'ಶಿಕ್ಷಕ ಹುದ್ದೆ' ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಪ್ರೌಢಶಾಲೆಯಲ್ಲಿ 11,000...

GOOD NEWS : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಪ್ರೌಢಶಾಲೆಯಲ್ಲಿ 11,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖ (1) ರನ್ವಯ 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ.

ಅದರಂತೆ 2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 9499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಉಲ್ಲೇಖ (3) ಮತ್ತು (4) ರಲ್ಲಿರುವಂತೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿದೆ. ಸದರಿ ಅತಿಥಿ ಶಿಕ್ಷಕರನ್ನು ದಿನಾಂಕ:01.06.2025 ರಿಂದ ನೇಮಕಾತಿ ಮಾಡಿಕೊಳ್ಳಲು ತಿಳಿಸಿದೆ.
ಷರತ್ತುಗಳು:-

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
  2. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.
  3. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.
  4. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ. ನಂತರ ಇತರ ವಿಷಯಗಳಿಗೆ ಆದ್ಯತೆ ನೀಡುವುದು.
  5. ಸದರಿ ವಿಷಯಗಳಿಗೆ ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.
  6. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಅದೇ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.
  7. ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.
  8. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸುವುದು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗೆ ಸ್ವೀಕೃತವಾದ ಅರ್ಜಿಗಳಲ್ಲಿ ಹೆಚ್ಚು ಮೆರಿಟ್ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡತಕ್ಕದ್ದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular