HomeLatest NewsBIG NEWS: ಅಮೃತಹಳ್ಳಿ ಡ್ರಗ್ಸ್ ಪ್ರಕರಣ: 3 ಕೋಟಿ ರೂ ಮೌಲ್ಯದ ಮಾದಕ ವಸ್ತು, ಗಾಂಜಾ...

BIG NEWS: ಅಮೃತಹಳ್ಳಿ ಡ್ರಗ್ಸ್ ಪ್ರಕರಣ: 3 ಕೋಟಿ ರೂ ಮೌಲ್ಯದ ಮಾದಕ ವಸ್ತು, ಗಾಂಜಾ ಜಪ್ತಿ

ಬೆಂಗಳೂರು: ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಈಸರು ಬರೋಬ್ಬರಿ 3 ಕೋಟಿ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ ಮಾಡಿದ್ದಾರೆ.

ಪ್ರಕರಣದಲ್ಲಿ ನೈಜಿರಿಯನ್ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ಅಮೃತಹಳ್ಳಿಯಲ್ಲಿ ಎಂಡಿಎಂಎ ಕ್ರಿಸ್ಟಲ್, ಗಾಂಜಾ ಮಾರುತ್ತಿದ್ದ ನೈಜಿರಿಯನ್ ಪ್ರಜೆ ಪೆಪೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರ್ಪಿ ಬಳಿ ಇದ್ದ 3 ಕೋಟಿ ಮೌಲ್ಯದ ಮೂರು ಕೆಜಿ ಡ್ರಗ್ಸ್, ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಹಾಗೂ ಸೇವನೆಯನ್ನು ಸಂಪೂರ್ಣ ನಿಯಂತ್ರಿಸಬೇಕು ಎಂದು ಗೃಹ ಸಚಿವ ಡ.ಅಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ಇದೀಗ ಅಮೃತಹಳ್ಳಿಯಲ್ಲಿ ಬೃಹತ್ ಪ್ರಮಾಣದ ಮಾದಕ ವಸ್ತುಯನ್ನು ಜಪ್ತಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular