ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ರೈತ ಖರೀದಿ ಕೇಂದ್ರ ಸ್ಥಾಪಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರೈತರು ತಮ್ಮ ಉತ್ಪನ್ನಗಳನ್ನು ಸಮರ್ಪಕ ಪ್ರಮಾಣದಲ್ಲಿ ಮಾರಾಟ ಮಾಡಲು, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ತೆರೆಯಬೇಕೆಂದು ತಿಳಿಸಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಈಗಾಗಲೇ ಸ್ಥಾಪಿಸಿರುವ ಖರೀದಿ ಕೇಂದ್ರಗಳನ್ನು ವರ್ಷದ 365 ದಿನಗಳ ಕಾಲ ಶಾಶ್ವತವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಪ್ರತಿ ಜಿಲ್ಲೆಯ ರೈತರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೈತ ಸೇನೆ ಕರ್ನಾಟಕ ಅಧ್ಯಕ್ಷ ವಿ. ವೀರೇಶ್ ಸೊಬರದಮಠ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದಾಗ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read