HomeLatest NewsBREAKING : ಕನ್ನಡ ಭಾಷೆಯ ಬಗ್ಗೆ 'ಕಮಲ್ ಹಾಸನ್' ವಿವಾದಾತ್ಮಕ ಹೇಳಿಕೆ : ನಟ ಶಿವರಾಜ್...

BREAKING : ಕನ್ನಡ ಭಾಷೆಯ ಬಗ್ಗೆ ‘ಕಮಲ್ ಹಾಸನ್’ ವಿವಾದಾತ್ಮಕ ಹೇಳಿಕೆ : ನಟ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್

ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ನಟ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಿವರಾಜ್ ಕುಮಾರ್ ಕಮಲ್ ಹಾಸನ್ ಕೂಡ ಕನ್ನಡಕ್ಕೆ ಗೌರವ ಕೊಡುತ್ತಾರೆ. ನಿನ್ನೆ ಬಂದಾಗಲೂ ಅಷ್ಟೇ ಚೆನ್ನಾಗಿ ಮಾತನಾಡಿದ್ದಾರೆ. ನಾನು ಅವರ ಬಹಳ ದೊಡ್ಡ ಅಭಿಮಾನಿ. ನಮ್ಮನ್ನು ಗೌರವದಿಂದ ಸಮಾರಂಭಕ್ಕೆ ಕರೆದಿದ್ದರು. ಅದೇ ಗೌರವದಿಂದ ನಾನೂ ಸಹ ಹೋಗಿದ್ದೆ . ವೇದಿಕೆ ಮೇಲೆ ಏನು ತಪ್ಪಾಯಿತು ಎಂಬುದು ನನಗೆ ಗೊತ್ತಾಗಲಿಲ್ಲ. ಇಲ್ಲಿ ಬಂದು ನೋಡಿದಾಗ ವಿವಾದ ಆಗಿತ್ತು. ನಾವು ಅವರನ್ನು ನೋಡಿ ಬೆಳೆದವರು, ಕಮಲ್ ಅವ್ರಿಗೆ ನಾನು ಕೊಡುವ ಸ್ಥಾನ ಬೇರೆ. ನಾನು ಅವರಿಂದ ಇನ್ಸ್ಪೈರ್ ಆಗಿದ್ದೀನಿ. ಕಂಡಿತ ಅದಕ್ಕೆ ಏನು ಪ್ರತಿಕ್ರಿಯೆ ಕೊಡಬೇಕೋ ಅವರು ಕೊಡ್ತಾರೆ” ಎಂದು ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

“ನಮ್ಮನ್ನು ಕಾರ್ಯಕ್ರಮಕ್ಕೆ ಕರೆದಾಗ ಗೌರವದಿಂದ ಹೋಗಿದ್ದೇವೆ. ಅದು ಏನಾಯ್ತೋ ನಮಗೂ ಗೊತ್ತಿಲ್ಲ. ಕನ್ನಡ ಪ್ರೀತಿ ಎನ್ನುವುದು ಯಾರೋ ಮಾತನಾಡಿದಾಗ ಮಾತ್ರ ಬರಬಾರದು. ಯಾವಾಗಲೂ ಇರಬೇಕು.. ಕನ್ನಡಕ್ಕಾಗಿ ಹೋರಾಡುತ್ತೇವೆ, ಬೇಕಿದ್ದರೆ ಸಾಯುತ್ತೇವೆ” ಎಂದಿದ್ದಾರೆ. ಯಾರೋ ಸ್ಟಾರ್ ನಟರ ಸಿನಿಮಾಗಳಿಗೆ ಬೆಂಬಲ ಕೊಟ್ಟರೆ ಸಾಲದು, ಹೊಸಬರ ಸಿನಿಮಾಗೂ ಬೆಂಬಲ ಕೊಡಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಕಮಲ್ ಹಾಸನ್ ಸಿನಿಮಾ ರಿಲೀಸ್ ಗೆ ಕರ್ನಾಟಕದಲ್ಲಿ ಯಾವ ಕಾರಣಕ್ಕೂ ಅವಕಾಶ ನೀಡೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular