ಹಾಸನ : ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರ ಕವನ ಕೆವಿ (21) ಎಂದು ಗುರುತಿಸಲಾಗಿದೆ.
ಈಕೆ ಹಾಸನ ನಗರದಲ್ಲಿ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಕುಸಿದು ಬಿದ್ದಿದ್ದಾಳೆ. ಪೋಷಕರು ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲೇ ಕವನ ಮೃತಪಟ್ಟಿದ್ದಾಳೆ. ಯುವಜನತೆಯಲ್ಲಿ, ಮಕ್ಕಳಲ್ಲಿ ಹೃದಯಾಘಾತ ಸಂಭವಿಸುವ ಪ್ರಕರಣ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ.
TAGGED:ಪದವಿ' ವಿದ್ಯಾರ್ಥಿನಿ ಸಾವು.!