HomeLatest NewsBIG NEWS : ಆಸ್ಪತ್ರೆಗಳಲ್ಲಿ ಬೋಧಕ ಸಿಬ್ಬಂದಿ-ಸ್ಟಾಫ್ ನರ್ಸ್ ನೇಮಕಾತಿಗೆ ಶೀಘ್ರವೇ ಕ್ರಮ : ಸಚಿವ...

BIG NEWS : ಆಸ್ಪತ್ರೆಗಳಲ್ಲಿ ಬೋಧಕ ಸಿಬ್ಬಂದಿ-ಸ್ಟಾಫ್ ನರ್ಸ್ ನೇಮಕಾತಿಗೆ ಶೀಘ್ರವೇ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಶಿವಮೊಗ್ಗ : ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಪ್ರಶಾಂತ ಕೆಕೊಡ ಮಾತನಾಡಿ, ಕಾಲೇಜಿನಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸೇರಿದಂತೆ ಬೋಧಕ ಸಿಬ್ಬಂದಿಗಳ ಕೊರತೆ ಇದೆ. ಆದ ಕಾರಣ ಬಿಎಎಂಎಸ್ ವಿದ್ಯಾರ್ಥಿಗಳ ಮಂಜೂರು ಸೀಟು 60 ಇದ್ದು, ದಾಖಲು ಸಂಖ್ಯೆ 33 ಕ್ಕೆ ಇಳಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯುರ್ವೇದ ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಕೊರತೆ ಸಹ ಇದ್ದು, ಇವರನ್ನು ನೇಮಕ ಮಾಡುವಂತೆ ಹಾಗೂ ಹೊಸದಾಗಿ ಪಿಜಿ ಕೋರ್ಸ್ ಆರಂಭಿಸಲು ಜಾಗದ ಅವಶ್ಯಕತೆ ಇದ್ದು, ಸ್ಥಳಾವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ವಿದ್ಯಾರ್ಥಿಗಳು ಮಾತನಾಡಿ, ಬಾಲಕರ ಹಾಸ್ಟೆಲ್ ಇಲ್ಲ. ಆದ್ದರಿಂದ ಸಮಸ್ಯೆಯಾಗುತ್ತಿದೆ. ಶೀಘ್ರದಲ್ಲಿ ಹಾಸ್ಟೆಲ್ಗೆ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಹಾಗೂ ಕ್ಯಾಂಟಿನ್, ವಸ್ತು ಸಂಗ್ರಹಾಲಯ, ಆಡಿಟೋರಿಯಂ, ಇಂಟರ್ನ್ಗಳಿಗೆ ಸ್ಟೆöÊಫಂಡ್ ಹೆಚ್ಚಳ ಮಾಡುಂತೆ ಕೋರಿದರು. ಮತ್ತು ವಿದ್ಯಾರ್ಥಿ ವೇತನ ಪಡೆಯುವಲ್ಲಿ ಎಸ್ಎಸ್ಪಿ ಪೋರ್ಟಲ್ನಲ್ಲಿ ಸಮಸ್ಯೆ ಇದ್ದು ಸರಿಪಡಿಸುವಂತೆ ಮನವಿ ಮಾಡಿದರು.

ಸಚಿವರು ಪ್ರತಿಕ್ರಿಯಿಸಿ, ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕಾತಿ, ಪಿಜಿ ಕೋರ್ಸ್ ಆರಂಭಿಸಲು ಜಾಗ ನೀಡುವ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲೆಯಲ್ಲಿ 35 ಆಯುಷ್ ಕೇಂದ್ರಗಳಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಈ ಕೇಂದ್ರಗಳಿಗೆ ಸಂಬಂಧಿಸಿದಂತೆ ಜಾರಿ ಮಾಡಲಾದ ಹೊಸ ಮಾರ್ಗಸೂಚಿಯನ್ನು ಆಯುಷ್ ಇಲಾಖೆ ಪಾಲನೆ ಮಾಡಬೇಕು ಎಂದರು. ಆಯುರ್ವೇದ ಆಸ್ಪತ್ರೆಗೆ ಹೆಚ್ಚುವರಿ ನೀರಿನ ಸಂಪರ್ಕ ಅಗತ್ಯವಿದ್ದು, ಶೀಘ್ರವೇ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸಹ ಶೀಘ್ರದಲ್ಲೇ ಪೂರೈಸಲಾಗುವುದು ಎಂದು ಭರವಸೆ ನೀಡಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular