HomeLatest NewsGOOD NEWS : ರಾಜ್ಯದಲ್ಲಿ 15,441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಸರ್ಕಾರ...

GOOD NEWS : ರಾಜ್ಯದಲ್ಲಿ 15,441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಸರ್ಕಾರ ಅನುಮೋದನೆ, 5,277 ಉದ್ಯೋಗ ಸೃಷ್ಟಿ.!

ಬೆಂಗಳೂರು : ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2,406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3,000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3,020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ, ಮೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆ ಯ 5,495 ಕೋಟಿ ರೂ. ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13,921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ ಸೃಷ್ಟಿಯಾಗಲಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.


For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular