HomeLatest News'ಅಂಚೆ ಇಲಾಖೆ' ಉತ್ಪನ್ನಗಳ ಮಾರಾಟಕ್ಕಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

‘ಅಂಚೆ ಇಲಾಖೆ’ ಉತ್ಪನ್ನಗಳ ಮಾರಾಟಕ್ಕಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವಿಸಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸವಿವರ, ಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜೂನ್ 16, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೆ. ಸಿ. ಪಾರ್ಕ್ ಹತ್ತಿರ ಇರುವ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಂಜಟರು ಹಾಗೂ ಸಲಹೆಗಾರರು, ಮಾಜಿಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡು ಬಂದ ಯಾವುದೇ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ರೂ.5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ (NSC) ಅಥವಾ ಕಿಸಾನ ವಿಕಾಸ ಪತ್ರ(KVP) ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ ನೀಡಲಾಗುವುದು. ನಿಗದಿತ ವೇತನವು ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ಜೀವ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ-ಕಚೇರಿಯನ್ನು ಸಂಪರ್ಕಿಸಬಹುದು ಎಂದು ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular