BREAKING : ರಾಜ್ಯದಲ್ಲಿ ಕೋಮು ಗಲಭೆಯಲ್ಲಿ ಭಾಗಿಯಾಗುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕಾನೂನು ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಕೋಮು ಗಲಭೆಯಲ್ಲಿ ಭಾಗಿಯಾಗುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬಿ.ಕೆ.ಹರಿಪ್ರಸಾದ್ ಅವರ ಭೇಟಿಯ ನಂತರ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ.

ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read