HomeLive Newsರೈತರಿಗೆ ಮುಖ್ಯ ಮಾಹಿತಿ : ಬಿತ್ತನೆ ಬೀಜ ಖರೀದಿ ವೇಳೆ ಕಡ್ಡಾಯವಾಗಿ ರಶೀದಿ ಪಡೆಯುವಂತೆ ಸೂಚನೆ

ರೈತರಿಗೆ ಮುಖ್ಯ ಮಾಹಿತಿ : ಬಿತ್ತನೆ ಬೀಜ ಖರೀದಿ ವೇಳೆ ಕಡ್ಡಾಯವಾಗಿ ರಶೀದಿ ಪಡೆಯುವಂತೆ ಸೂಚನೆ

ದಾವಣಗೆರೆ : ರೈತರಿಗೆ ಸರ್ಕಾರದಿಂದ ಸಿಗುವ ರಿಯಾಯಿತಿ ದರದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರೆ ಯೋಜನೆಗಳ ಲಾಭವನ್ನು ಸಕಾಲದಲ್ಲಿ ರೈತರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಹಾಗೂ ಇಲಾಖೆಯ ಯೋಜನೆಗಳ ಅನುಷ್ಠಾನ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗ ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ಬೀತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ರೈತರು ಅಧಿಕೃತ ಮಾರಾಟಗಾರರಿಂದ ಬೀಜ ಖರೀದಿಸಬೇಕು. ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಪಡೆದುಕೊಂಡು ಬಿತ್ತನೆ ಮಾಡಬೇಕು. ಬೀಜಗಳನ್ನು ರೈತರು ಖರೀದಿಸಿದ ನಂತರ ಕಡ್ಡಾಯವಾಗಿ ರಶೀದಿಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಈಗಾಗಲೇ ತಾಲ್ಲೂಕು ಆಡಳಿತ, ರೈತರ ಬೇಡಿಕೆಗೆ ಅನುಗುಣವಾಗಿ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳನ್ನು ಪೂರೈಸಲು ಸನ್ನದ್ಧವಾಗಿದೆ. ಹಾಗೂ ಈಗಾಗಲೇ ತಾಲ್ಲೂಕಿನ ಎಲ್ಲಾ ಕೃಷಿ ಪರಿಕರ ಮಾರಾಟಗಾರರಿಗೂ ಈ ಕುರಿತು ತರಬೇತಿಯನ್ನು ಸಹ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳಪೆ ಗುಣಮಟ್ಟದ ಪರಿಕರಗಳನ್ನು ಮಾರಾಟ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ರೈತರು ಸಹ ಈ ನಿಟ್ಟಿನಲ್ಲಿ ಯಾವುದೇ ಕೃಷಿ ಪರಿಕರಗಳನ್ನು ಮುಖ್ಯವಾಗಿ ಬಿತ್ತನೆ ಬೀಜಗಳನ್ನು ಅನಧಿಕೃತ ಅಥವಾ ಪರವಾನಿಗೆ ಇಲ್ಲದ ಮಾರಾಟಗಾರರಿಂದ ಪಡೆಯಬಾರದು ಎಂದು ತಿಳಿಸಿದರು. ತಾಲ್ಲೂಕಿನ ಯಾವುದೇ ಭಾಗದಲ್ಲಿ ಅಂತಹ ಕಾನೂನು ಬಾಹಿರ ಕೃಷಿ ಪರಿಕರಗಳ ಸಂಗ್ರಹ, ಬಿತ್ತನೆ ಬೀಜ ಮಾರಾಟ ಕಂಡು ಬಂದಲ್ಲಿ ಮಾಹಿತಿ ನೀಡಬೇಕು. ನಕಲಿ ಸಂಸ್ಥೆಗಳು, ಅನಧಿಕೃತ ವ್ಯಕ್ತಿಗಳ ಮೇಲೆ ನಿಗಾ ವಹಿಸಬೇಕು. ಹೊರ ಜಿಲ್ಲೆಗಳಿಗೆ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದರು.

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೆÇಟ್ಯಾμï ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬೇಕು. ಆದರೆ ಬೆಳೆಗಳಿಗೆ ಸಾರಜನಕ, ರಂಜಕ, ಪೆÇಟ್ಯಾμï ರಸಗೊಬ್ಬರಗಳನ್ನು 4 : 2 : 1ರ ಅನುಪಾತದಲ್ಲಿ ಬಳಸಬೇಕು. ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೆÇಟ್ಯಾμï ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯ ಎಂದರು. ಅಲ್ಲದೆ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ ಹಾಗೂ ಪೆÇಟ್ಯಾμï ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಳನ್ನು ಬಳಸಬೇಕು. ವಿವಿಧ ಹಂತಗಳಲ್ಲಿ ಜರುಗುವ ತರಬೇತಿಗಳು, ಕಾರ್ಯಾಗಾರಗಳು ಹಾಗೂ ಅಭಿಯಾನಗಳಲ್ಲಿ ಕಡ್ಡಾಯವಾಗಿ ರೈತರಿಗೆ ಹಾಗೂ ರಸಗೊಬ್ಬರ ಮಾರಾಟಗಾರರಿಗೆ ಅರಿವು ಮೂಡಿಸಬೇಕು. ಮಾರಾಟಗಾರರು ರಸಗೊಬ್ಬರಗಳನ್ನು ಮಾರಾಟ ಮಾಡುವಾಗ ಪೊಟ್ಯಾಷ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಉಪಯುಕ್ತತೆ ಬಗ್ಗೆ ರೈತರಿಗೆ ತಿಳಿಸಬೇಕು. ಯೂರಿಯಾ ಗೊಬ್ಬರವನ್ನು ಇಂಡಸ್ಟ್ರಿಯಲ್ಗಳಿಗೆ ಮಾರಾಟ ಮಾಡಬಾರದು ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಉಪಕೃಷಿ ನಿರ್ದೇಶಕ ಅಶೋಕ, ಲೀಡ್ ಫರ್ಟಿಲೈಸರ್ಸ್ ಸಂಸ್ಥೆಯ ಅಧಿಕಾರಿ ಉಮೇಶ್, ರಸಗೊಬ್ಬರ ಪೂರೈಸುವ ಸಂಸ್ಥೆಯ ಮಾಲೀಕರು, ಬೀತ್ತನೆ ಬೀಜ ಸರಬರಾಜು ಮಾಡುವ ಮಾಲೀಕರು ಹಾಜರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular