HomeLatest NewsBREAKING: ನಟ 'ಕಮಲ್ ಹಾಸನ್' ವಿರುದ್ಧ ಸಿಡಿದೆದ್ದ ಕರವೇ ಕಾರ್ಯಕರ್ತರು : 'ಫಿಲ್ಮ್ ಚೇಂಬರ್' ಒಳಗೆ...

BREAKING: ನಟ ‘ಕಮಲ್ ಹಾಸನ್’ ವಿರುದ್ಧ ಸಿಡಿದೆದ್ದ ಕರವೇ ಕಾರ್ಯಕರ್ತರು : ‘ಫಿಲ್ಮ್ ಚೇಂಬರ್’ ಒಳಗೆ ನುಗ್ಗಿ ಪ್ರತಿಭಟನೆ.!

ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಬಹುಭಾಷಾ ನಟ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೇಳಿಕೆ ಹಿಂಪಡೆದು ಕನ್ನಡಿಗರ ಕ್ಷಮೆಯಾಚಿಸುವಂತೆ ಪಟ್ಟು ಹಿಡಿದಿದ್ದರು. ತನ್ನ ವಚಾಳಿತನ ತನಗೇ ಮುಳುವಾಗುತ್ತಿದ್ದರೂ ತಪ್ಪು ತಿದ್ದಿಕೊಳ್ಳದೇ ಸಮರ್ಥಸಿಕೊಂಡಿರುವ ಕಮಲ್ ಹಾಸನ್ ತಾನು ಕ್ಷಮೆ ಕೇಳಲ್ಲ ಎಂದು ಉದ್ಧಟತನ ಮೆರೆದಿದ್ದಾರೆ. ಕಮಲ್ ಹಾಸನ್ ಮೊಂಡಾಟಕ್ಕೆ ಸಿಡಿದೆದ್ದಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ನಟ ಕಮಲ್ ಹಾಸನ್ ವಿರುದ್ಧ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಯಾವುದೇ ಕಾರಣಕ್ಕೂ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಕಮಲ್ ಹಾಸನ್ ದುರಹಂಕಾರಕ್ಕೆ ತಕ್ಕ ಉತ್ತರ ನೀಡುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಫಿಲ್ಮ್ ಚೇಂಬರ್ ಬಳಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಬಳಿಕ ಫಿಲ್ಮ್ ಚೇಂಬರ್ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಮಲ್ ಹಾಸನ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಅವರ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ. ತಕ್ಷಣ ಕಮಲ್ ಹಾಸನ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ ಇದು ಡಿಸ್ಟ್ರಿಬ್ಯೂಟರ್ ಗಳಿಗೂ ನೀಡುವ ಎಚ್ಚರಿಕೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular