HomeLatest NewsGOOD NEWS: ಸರ್ಕಾರಿ ಶಾಲೆ ಮಕ್ಕಳಿಗೆ 2 ಸಾವಿರ ರೂ.ವರೆಗೆ ಠೇವಣಿ

GOOD NEWS: ಸರ್ಕಾರಿ ಶಾಲೆ ಮಕ್ಕಳಿಗೆ 2 ಸಾವಿರ ರೂ.ವರೆಗೆ ಠೇವಣಿ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ವಿಶೇಷ ಕ್ರಮ ಅನುಸರಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಉತ್ತೂರು, ಶಿರೋಳ, ಹನಗಂಡಿ ಸೇರಿ ವಿವಿಧ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ 1 ಸಾವಿರದಿಂದ 2 ಸಾವಿರ ರೂ.ವರೆಗೆ ‘ಠೇವಣಿ’ಇಡುವ ಯೋಜನೆ ಜಾರಿಗೊಳಿಸಲಾಗಿದೆ.

ಉತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯವರೆಗೆ 175 ಮಕ್ಕಳು ಓದುತ್ತಿದ್ದು ತಾವು ಓದಿದ ಶಾಲೆಗೆ ಇತ್ತೀಚೆಗೆ ಭೇಟಿ ನೀಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಒಂದನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗೆ 2,000 ರೂ. ಠೇವಣಿ ಇಡಲಾಗುವುದು ಎಂದು ಘೋಷಿಸಿದ್ದಾರೆ.

ಶಿರೋಳದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ 205 ವಿದ್ಯಾರ್ಥಿಗಳಿದ್ದಾರೆ, ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಶಾಲಾ ಅಭಿವೃದ್ಧಿ ಸಮಿತಿ ಮೊದಲನೇ ತರಗತಿಗೆ ದಾಖಲಾಗುವ ಪ್ರತಿ ಮಗುವಿನ ಹೆಸರಲ್ಲಿ 1000 ರೂ. ಠೇವಣಿ ಇಡಲು ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹನಗಂಡಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ಲಿಂಗನೂರ ಶಾಲೆಯ ಎಸ್ಡಿಎಂಸಿ ಸದಸ್ಯರು ಮಕ್ಕಳ ಹೆಸರಲ್ಲಿ ಠೇವಣಿ ಇಡಲು ನಿರ್ಧರಿಸಿದ್ದಾರೆ,

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular