HomeLatest News‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಶುಭ ಸುದ್ದಿ: ಖಾತೆಗೆ ಪರಿಪಕ್ವ ಮೊತ್ತ ಪಾವತಿ

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಶುಭ ಸುದ್ದಿ: ಖಾತೆಗೆ ಪರಿಪಕ್ವ ಮೊತ್ತ ಪಾವತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಪಡೆದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಾವತಿಸಲು ಪ್ರಸ್ತಾವನೆ ಸಲ್ಲಿಸಬಹುದು.

2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗಳು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ದಾವಣಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ನಂದಗೋಕುಲ ಬಿಲ್ಡಿಂಗ್, ದುರ್ಗಾಂಬಿಕಾ ಸ್ಕೂಲ್ ಎದುರು ದಾವಣಗೆರೆ ದೂ.ಸಂ: 08192-263219 ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಬಹುದು.

ಮೂಲ ಭಾಗ್ಯಲಕ್ಷ್ಮಿ ಬಾಂಡ್, ಬ್ಯಾಂಕ್ ಖಾತೆಯ ಪಾಸ್ ಪುಸ್ತಕ, ಬಿಪಿಎಲ್ ರೇಷನ್ ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ತಂದೆ, ತಾಯಿ ಮಗುವಿನ ಆಧಾರ್ ಕಾರ್ಡ್ ಜನನ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular