HomeLatest Newsರಾಜ್ಯದಲ್ಲಿ ಕೈಗಾರಿಕಾ ಕ್ರಾಂತಿ: ಹೆಲಿಕಾಪ್ಟರ್ ಘಟಕ ಸೇರಿ 16 ಸಾವಿರ ಕೋಟಿ ರೂ. ಭಾರೀ ಹೂಡಿಕೆ,...

ರಾಜ್ಯದಲ್ಲಿ ಕೈಗಾರಿಕಾ ಕ್ರಾಂತಿ: ಹೆಲಿಕಾಪ್ಟರ್ ಘಟಕ ಸೇರಿ 16 ಸಾವಿರ ಕೋಟಿ ರೂ. ಭಾರೀ ಹೂಡಿಕೆ, ಉದ್ಯೋಗ ಸೃಷ್ಟಿ ಯೋಜನೆಗೆ ಅನುಮೋದನೆ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯಲ್ಲಿ ಸುಮಾರು 15,000+ ಕೋಟಿ ರೂ.ಮೊತ್ತದ ಹೂಡಿಕೆ ಯೋಜನೆಗಳಿಗೆ ಅನುಮೋದನೆ ದೊರೆತಿದೆ.

ಕರ್ನಾಟಕದಾದ್ಯಂತ ಈ ನೂತನ ಯೋಜನೆಗಳು ಕಾರ್ಯರೂಪಗೊಳ್ಳಲಿದ್ದು ಸುಮಾರು  5,200+ ಉದ್ಯೋಗಗಳು ಸೃಷ್ಟಿಯಾಗಲಿದೆ.

ಏರ್ ಕ್ರಾಫ್ಟ್ ಕಂಪನಿ ಏರ್‌ಬಸ್‌ನ ಎಚ್125 ಹೆಲಿಕಾಪ್ಟರ್ ಘಟಕ ಕರ್ನಾಟಕದಲ್ಲಿ ನಿರ್ಮಾಣವಾಗುತ್ತಿದೆ. ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಸೆಂಬ್ಲಿ ಘಟಕ ನಿರ್ಮಾಣಗೊಳ್ಳಲಿದೆ. ಜಗತ್ತಿನಲ್ಲಿರುವ ಈ ರೀತಿಯ ಕೇವಲ 4 ಅಸೆಂಬ್ಲಿ ಘಟಕಗಳಲ್ಲಿ ಕರ್ನಾಟಕವೂ ಸ್ಥಾನ ಭದ್ರ ಮಾಡಿಕೊಳ್ಳುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅಧ್ಯಕ್ಷತೆಯಲ್ಲಿ  ನಡೆದ 153ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ, ಒಟ್ಟು  1,741.60 ಕೋಟಿ ರೂ. ಹೂಡಿಕೆ ಮೊತ್ತದ 63 ಹೊಸ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರ ಪರಿಣಾಮ 7,219 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ದಕ್ಷಿಣ ಕನ್ನಡ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿವಿಧ ಕೈಗಾರಿಕೆಗಳ ಸ್ಥಾಪನೆಯಾಗಲಿದೆ. 50 ಕೋಟಿ ರೂ.ಗಿಂತ ಅಧಿಕ ವೆಚ್ಚದ 7 ಮಹತ್ವದ ಯೋಜನೆಗಳು ಹಾಗೂ 53 ಮಧ್ಯಮ ಹೂಡಿಕೆಯ ಯೋಜನೆಗಳಿಗೂ ಅನುಮೋದನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular