HomeLatest NewsBREAKING: ದಕ್ಷಿಣ ಕನ್ನಡದಲ್ಲಿ ಸರಣಿ ಸೇಡಿನ ಹತ್ಯೆ: ಹಿರಿಯ ಅಧಿಕಾರಿಗಳ ತಲೆದಂಡ: ಮಂಗಳೂರು ಪೊಲೀಸ್ ಆಯುಕ್ತ,...

BREAKING: ದಕ್ಷಿಣ ಕನ್ನಡದಲ್ಲಿ ಸರಣಿ ಸೇಡಿನ ಹತ್ಯೆ: ಹಿರಿಯ ಅಧಿಕಾರಿಗಳ ತಲೆದಂಡ: ಮಂಗಳೂರು ಪೊಲೀಸ್ ಆಯುಕ್ತ, SP ವರ್ಗಾವಣೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸರಣಿ ಸೇಡಿನ ಹತ್ಯೆ, ಕೋಮು ಹಿಂಸಾಚಾರದ ವಿರುದ್ಧ ಜನರಿಂದ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಸರ್ಕಾರ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.

ಮಂಗಳೂರು ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಎಸ್ಪಿಯಾಗಿ ಅರುಣ್ ಕೆ. ಅವರನ್ನು ನೇಮಿಸಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮಾ ಅಗರವಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರು ಪೋಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ. ಅರುಣ್ ಅವರನ್ನು ನೇಮಕ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular