HomeLatest Newsತಂದೆ ಸಾವಿನ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆ ಸಾವಿನ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಶಿವಮೊಗ್ಗ: ತಂದೆಯ ಸಾವಿನ ನೋವಿನಲ್ಲಿಯೂ ವಿದ್ಯಾರ್ಥಿನಿ ಪರೀಕ್ಷೆ ಬರೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ.

ಸಾಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯ ತಂದೆ ನಿಧನರಾಗಿದ್ದು, ತಂದೆಯ ಸಾವಿನ ನೋವಿನ ನಡುವೆಯೂ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾರೆ. ಸಾಗರದ ಸುಭಾಷ್ ನಗರ ಬಡಾವಣೆಯ ಲಾಂಡ್ರಿ ಮಾಲೀಕ ಮಧುಸೂದನ್(56) ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮರುದಿನ ಅವರ ಪುತ್ರಿ ಮೌಲ್ಯಾ ಅವರ ದ್ವಿತೀಯ ಬಿಕಾಂ 4ನೇ ಸೆಮಿಸ್ಟರ್ ಪರೀಕ್ಷೆ ಇತ್ತು. ಕುಟುಂಬದವರ ಸಹಕಾರದಿಂದ ಮೌಲ್ಯಾ ಪರೀಕ್ಷೆ ಬರೆದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular