ಮಂಗಳೂರು : ಮಂಗಳೂರು ಸಮೀಪದ ಉಳ್ಳಾಲದ ಮೊಂಟೆಪದವು ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರ ರಕ್ಷಣೆ ಮಾಡಲಾಗಿದೆ.
ಮೊಂಟೆಪದವು ಬಳಿ ಗುಡ್ಡ ಕುಸಿದು ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

