HomeLatest NewsBREAKING: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

BREAKING: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಹುಬ್ಬಳ್ಳಿಗೆ ಹೊರಟಿದ್ದ ಕಾರ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದ್ದು, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ- ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular