HomeLatest NewsBIG NEWS: ಪುರಸಭೆ ಮುಖ್ಯಾಧಿಕಾರಿ ಸಸ್ಪೆಂಡ್

BIG NEWS: ಪುರಸಭೆ ಮುಖ್ಯಾಧಿಕಾರಿ ಸಸ್ಪೆಂಡ್

ದಾವಣಗೆರೆ: ಕರ್ತವ್ಯಲೋಪ, ಹಣ ದುರುಪಯೋಗ ಹಿನ್ನೆಲೆಯಲ್ಲಿ ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಹೆಚ್.ಎನ್.ಭಜಕ್ಕನವರ್ ಅಮಾನತುಗೊಂಡಿರುವ ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ. ಆಸ್ತಿ ನೋಂದಣಿಗೆ ಅಗತ್ಯವಿರುವ ಡಿಜಿಟಲ್ ಇ-ಖಾತಾ ತಿದ್ದುಪಡಿ ಮಾಡಿ ಸರ್ಕಾರಕ್ಕೆ ಬರಬೇಕಿದ್ದ ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆ ಮಾಡಿದ ಆರೋಪ ಹೆಚ್.ಎನ್.ಭಜಕ್ಕನವರ್ ಮೇಲೆ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಆರ್ಪ ಸಾಬೀತಾದ ಹಿನ್ನೆಲೆಯಲ್ಲಿ ಹೆಚ್.ಎನ್.ಭಜಕ್ಕನವರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular