HomeLatest NewsBREAKING : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ...

BREAKING : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ.!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಲಾಗಿದೆ.

ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ತಗ್ಗು ಪ್ರದೇಶ, ನದಿ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು ಅಗತ್ಯ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ವರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿವತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30.05.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
  2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
  3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
  5. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
  6. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
  7. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular