ಮಂಗಳೂರು : ಮಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಮನೆ ಮೇಲೆ ಗುಡ್ಡ ಕುಸಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.
ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ.ಮೊಂಟೆಪದವು ಬಳಿ ಗುಡ್ಡ ಕುಸಿದು ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

