HomeLatest Newsಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ನೀಡಲಾಗುವುದು.

2024ರ ಜನವರಿ 1ರಿಂದ ಅನ್ವಯವಾಗುವಂತೆ 5 ಲಕ್ಷ ರೂ. ಇಡುಗಂಟು ಯೋಜನೆ ಜಾರಿಗೆ ಬರಲಿದೆ. ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಯೋಜನೆ ಅನ್ವಯವಾಗುತ್ತದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿದ ಅತಿಥಿ ಉಪನ್ಯಾಸಕರಿಗೂ ಸೌಲಭ್ಯ ಸಿಗಲಿದೆ. ಈ ಯೋಜನೆಗೆ ಒಟ್ಟಾರೆ ಇಡುಗಂಟು ಸೌಲಭ್ಯವನ್ನು ಕ್ಲೇಮ್ ಮಾಡುವ ಅತಿಥಿ ಉಪನ್ಯಾಸಕರು ಸರ್ಕಾರ ಅಥವಾ ಅನುದಾನಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ನೇಮಕಾತಿ ಹೊಂದಿ ಸೇವೆ ಸಲ್ಲಿಸಿದ್ದಲ್ಲಿ ಅಂತಹ ಅತಿಥಿ ಉಪನ್ಯಾಸಕರಿಗೆ ಯೋಜನೆ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular