HomeLatest Newsಕಚೇರಿಯಲ್ಲೇ ಲೋಕಾಯುಕ್ತ ಪೊಲೀಸರಿಗೆ ಲಂಚದ ಆಮಿಷ: ಸರ್ಕಾರಿ ಅಧಿಕಾರಿ ವಶಕ್ಕೆ

ಕಚೇರಿಯಲ್ಲೇ ಲೋಕಾಯುಕ್ತ ಪೊಲೀಸರಿಗೆ ಲಂಚದ ಆಮಿಷ: ಸರ್ಕಾರಿ ಅಧಿಕಾರಿ ವಶಕ್ಕೆ

ಮಂಗಳೂರು: ಲೋಕಾಯುಕ್ತ ಪೊಲೀಸ್ ಇನ್ ಸ್ಪೆಕ್ಟರ್ ಗೆ ಲಂಚದ ಆಮಿಷವೊಡ್ಡಿದ ಆರೋಪದ ಮೇಲೆ ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ಗಜೇಂದ್ರ ವಿರುದ್ಧ ಲೋಕಾಯುಕ್ತ ಪೊಲೀಸರು ಕ್ರಮಕೈಗೊಂಡಿದ್ದು, ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಉದ್ಯಮಿಯ ಜೊತೆಗೆ ಮಂಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಗೆ ಆಗಮಿಸಿದ್ದ ಗಜೇಂದ್ರ ತನ್ನ ವಿರುದ್ಧ, ಇಲಾಖೆಯ ವಿರುದ್ಧ ಯಾವುದೇ ಕೇಸ್ ದಾಖಲಿಸಬಾರದು, ಮೂರು ತಿಂಗಳಿಗೊಮ್ಮೆ ಲೋಕಾಯುಕ್ತ ಪೊಲೀಸ್ ಠಾಣೆಗೆ 25,000 ರೂ. ನೀಡುತ್ತೇನೆ ಎಂದು ಆಮಿಷವೊಡ್ಡಿದ್ದಾರೆ.

ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಈ ಕುರಿತು ದೂರು ನೀಡಿದ್ದು, ಅವರ ದೂರಿನ ಅನ್ವಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಜೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್, ಪೊಲೀಸ್ ನಿರೀಕ್ಷಕರಾದ ಜಿ. ಭಾರತಿ, ಕೆ.ಎನ್. ಚಂದ್ರಶೇಖರ್ ಪಾಲ್ಗೊಂಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular