HomeKarnatakaರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ: ನಿಷೇಧ ಕಾಯ್ದೆ ಜಾರಿಗೊಳಿಸಿದ...

ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ: ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ –ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಶುಕ್ರವಾರ ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಕಾಯ್ದೆ ಜಾರಿಗೆ ತರಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರೆಗೆ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸುವವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಬಾರ್, ರೆಸ್ಟೋರೆಂಟ್, ಪಬ್, ಉಪಹಾರ ಗೃಹಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ 50 ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ದಂಡ, ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular