HomeLatest Newsನಾಳೆಯಿಂದ ನಗರಸಭೆ, ಪುರಸಭೆ, ಪಾಲಿಕೆ ಪಟ್ಟಣ ಪಂಚಾಯಿತಿಯಲ್ಲಿ ನೀರು ಪೂರೈಕೆ ಬಂದ್

ನಾಳೆಯಿಂದ ನಗರಸಭೆ, ಪುರಸಭೆ, ಪಾಲಿಕೆ ಪಟ್ಟಣ ಪಂಚಾಯಿತಿಯಲ್ಲಿ ನೀರು ಪೂರೈಕೆ ಬಂದ್

ಹಾವೇರಿ: ಸ್ಥಳೀಯ ಸಂಸ್ಥೆಗಳ ನೌಕರರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜೂನ್ 1ರ ಭಾನುವಾರದಿಂದ ಕುಡಿಯುವ ನೀರು ಪೂರೈಕೆ ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಪೌರ ಸೇವಾ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎನ್. ಪ್ರಸಾದ್ ಹೇಳಿದ್ದಾರೆ.

ಹಾವೇರಿ ನಗರಸಭೆ ಎದುರು ರಾಜ್ಯ ಪೌರ ನೌಕರರ ಸಂಘ, ರಾಜ್ಯ ಪೌರ ಸೇವಾ ನೌಕರರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಶುಕ್ರವಾರ ಭಾಗವಹಿಸಿದ್ದ ಪ್ರಸಾದ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸ್ಥಳೀಯ ಸಂಸ್ಥೆಗಳ ನೌಕರರು ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಕಾನೂನು ಕಾರಣದ ನೆಪ ಹೇಳುತ್ತಿದೆ. ಇದರ ವಿರುದ್ಧ ಹೋರಾಟ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ 360 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜೂನ್ 1ರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಸ ಸಂಗ್ರಹ, ವಿಲೇವಾರಿ ಕಾರ್ಯವನ್ನು ಶೇಕಡ 50ರಷ್ಟು ಸ್ಥಗಿತಗೊಳಿಸಿ ಮೇ 28 ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಮತ್ತು ಇಲಾಖೆ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ. ಹೀಗಾಗಿ ಹೋರಾಟ ಮುಂದುವರೆಸಲಾಗಿದೆ ಇದರಿಂದ ಸ್ವಚ್ಛತೆ ಕಸ ಸಂಗ್ರಹ, ವಿಲೇವಾರಿ, ನೀರು ಪೂರೈಕೆ, ಕಚೇರಿ ಕೆಲಸಗಳು ವ್ಯತ್ಯಯವಾಗಲಿವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular