HomeLatest Newsವಿವಾಹಿತೆಯೊಂದಿಗೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

ವಿವಾಹಿತೆಯೊಂದಿಗೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೇಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿಕೊಪ್ಪದಲ್ಲಿ ಮಹಿಳೆಯೊಂದಿಗೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ತಮ್ಮಡಿಕೊಪ್ಪದ ಸುಜಾತ(33), ಆಯನೂರು ಕೋಟೆ ನಿವಾಸಿ ಸಚಿನ್(24) ಆತ್ಮಹತ್ಯೆ ಮಾಡಿಕೊಂಡವರು. 13 ವರ್ಷಗಳ ಹಿಂದೆ ಸುಜಾತ ಅವರನ್ನು ಶಿರಸಿ ಯುವಕನ ಜೊತೆಗೆ ಮದುವೆ ಮಾಡಿಕೊಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಪತಿಯಿಂದ ದೂರವಾಗಿದ್ದ ಸುಜಾತ ಎರಡು ವರ್ಷದಿಂದ ತವರು ಮನೆಯಲ್ಲಿ ವಾಸವಾಗಿದ್ದರು. ಆಯನೂರು ಕೋಟೆಯ ಸಚಿನ್ ಪರಿಚಯವಾಗಿದ್ದು, ಕಳೆದ ಒಂದು ವಾರದಿಂದ ತಮ್ಮಡಿಕೊಪ್ಪದ ಸುಜಾತ ಮನೆಯಲ್ಲಿ ಸಚಿನ್ ವಾಸವಾಗಿದ್ದ. ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular