ಬೆಂಗಳೂರು : ರಾಜ್ಯದ 49 ತಾಲೂಕು ಕೇಂದ್ರಗಳು ಹಾಗೂ ಹಲವು ಜಿಲ್ಲಾ ಕೇಂದ್ರಗಳಲ್ಲಿ ನೂತನ ಪ್ರಜಾಸೌಧವನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಲಭ್ಯವಾಗಿಸುವ ಉದ್ದೇಶದಿಂದ ರಾಜ್ಯದ 49 ತಾಲೂಕು ಕೇಂದ್ರಗಳು ಹಾಗೂ ಹಲವು ಜಿಲ್ಲಾ ಕೇಂದ್ರಗಳಲ್ಲಿ ನೂತನ ಪ್ರಜಾಸೌಧವನ್ನು ಸ್ಥಾಪಿಸಲು ಮುಂದಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

