HomeLatest Newsಆಸ್ತಿ ಮಾಲೀಕರಿಗೆ ಮುಖ್ಯ ಮಾಹಿತಿ: ರಿಯಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾಲಿಸಲು ಇಂದೇ ಕೊನೆ ದಿನ

ಆಸ್ತಿ ಮಾಲೀಕರಿಗೆ ಮುಖ್ಯ ಮಾಹಿತಿ: ರಿಯಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾಲಿಸಲು ಇಂದೇ ಕೊನೆ ದಿನ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರು ತಮ್ಮ ಸ್ವತ್ತುಗಳಿಗೆ ರಿಯಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾವತಿಸಲು ಮೇ 31 ಕೊನೆಯ ದಿನವಾಗಿದೆ.

2025- 26 ನೇ ಸಾಲಿನ ಆಸ್ತಿ ತೆರಿಗೆ ಪಾವತಿಯ ವೇಳೆ ಏಪ್ರಿಲ್ 1ರಿಂದ ಎರಡು ತಿಂಗಳು ರಿಯಾಯಿತಿ ನೀಡಲಾಗಿದೆ. ಮೇ 31ರ ಶನಿವಾರಕ್ಕೆ ಈ ಗಡುವು ಮುಕ್ತಾಯವಾಗಲಿದೆ. ಬಡ್ಡಿ ಹಾಗೂ ದಂಡ ಇಲ್ಲದೆ ಜೂನ್ ನಲ್ಲಿಯೂ ತೆರಿಗೆ ಪಾವತಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸಕ್ತ ಸಾಲಿನ ಮೊದಲ ಎರಡು ತಿಂಗಳ ಅವಧಿಯಲ್ಲಿ ಶುಕ್ರವಾರದವರೆಗೆ 2,424.93 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಕಳೆದ ಸಾಲಿನ ಒಟಿಎಸ್ ಯೋಜನೆ ಜಾರಿಯಲ್ಲಿದ್ದ ಕಾರಣ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ 5000 ಕೋಟಿ ರೂ.ಗೂ ಹೆಚ್ಚಿನ ಆದಾಯ ಸಂಗ್ರಹವಾಗಿತ್ತು. ಈ ಬಾರಿ ಹೆಚ್ಚಿನ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಕಾರಣ 5 ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಸಂಗ್ರಹಿಸುವ ಗುರಿ ಹೊಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular