HomeLatest NewsBIG NEWS: ಪರಿಶಿಷ್ಟರಿಗೆ ‘ಒಳ ಮೀಸಲಾತಿ ಆಯೋಗ’ದ ಅವಧಿ ಜು. 31ರವರೆಗೆ ವಿಸ್ತರಣೆ

BIG NEWS: ಪರಿಶಿಷ್ಟರಿಗೆ ‘ಒಳ ಮೀಸಲಾತಿ ಆಯೋಗ’ದ ಅವಧಿ ಜು. 31ರವರೆಗೆ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯ ಏಕಸದಸ್ಯ ವಿಚಾರಣಾ ಆಯೋಗದ ಅವಧಿಯನ್ನು ಜುಲೈ 31ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ.

ನಾಗಮೋಹನದಾಸ್ ಅಧ್ಯಕ್ಷತೆಯ ಏಕಸದಸ್ಯ ವಿಚಾರಣಾ ಆಯೋಗದ ಅವಧಿ ಮೇ 31ರ ಶನಿವಾರ ಮುಕ್ತಾಯವಾಗಬೇಕಿತ್ತು. ಪರಿಶಿಷ್ಟ ಜಾತಿಗಳಿಗೆ ಒಳಮಿಸಲಾತಿ ಕಲ್ಪಿಸಲು ಆಯೋಗ ಕೈಗೊಂಡಿರುವ ಸಮಗ್ರ ಸಮೀಕ್ಷೆ ಜೂನ್ 1ರವರೆಗೂ ನಡೆಯಲಿದೆ. ಸಮೀಕ್ಷೆಯ ದತ್ತಾಂಶಗಳನ್ನು ಪರಿಶೀಲಿಸಿ ಕೊರತೆಗಳನ್ನು ಸರಿಪಡಿಸಿ ಅಂತಿಮ ಶಿಫಾರಸು ಮಾಡಲು ಇನ್ನು ಎರಡು ತಿಂಗಳು ಕಾಲಾವಕಾಶ ಬೇಕಿದೆ ಎಂದು ಆಯೋಗದ ಅಧ್ಯಕ್ಷರು ಕೋರಿದ್ದ ಹಿನ್ನೆಲೆಯಲ್ಲಿ ಆಯೋಗದ ಅವಧಿಯನ್ನು ಜುಲೈ 31ರವರೆಗೆ ಎರಡು ತಿಂಗಳ ಕಾಲ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular