2025-26ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಮೆಟ್ರಿಕ್ ಪೂರ್ವ (9 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of electronics And Information Technology ಅವರು ಅಭಿವೃದ್ಧಿ ಪಡಿಸಿರುವ National Scholarship Portal website Link: https://scholarship.gov.in) ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸಬೇಕಾಗಿರುತ್ತದೆ.
ಒಟಿಆರ್ ಸಂಖ್ಯೆಯನ್ನು ಕ್ರಿಯೆಟ್ ಮಾಡಿಕೊಂಡು ತದನಂತರ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಎಸ್ಎಸ್ಪಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
TAGGED:NSP' ಪೋರ್ಟಲ್