HomeLatest NewsBREAKING : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ...

BREAKING : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

ಡಿಜಿಟಲ್ ಡೆಸ್ಕ್ : ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ, ಗದಗ, ಹಾವೇರಿ ಬಳಿಕ ಇದೀಗ ಬೆಳಗಾವಿ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವರಾಜ್ ಅರಸು ಅಭಿವೃದ್ಧಿ ನಿಗದ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ ಅವರ ಬೆಳಗಾವಿಯ ವಿದ್ಯಾನಗರದಲ್ಲಿರುವ ನಿವಾಸ, ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular