HomeLatest NewsBIG NEWS: ಗುಡ್ಡ ಕುಸಿದು ಮೂವರ ಸಾವು ಪ್ರಕರಣ: ಅವೈಜ್ಞಾನಿಕ ಕಾಮಗಾರಿ ಕಾರಣ: ಅಧಿಕಾರಿಗಳ ವಿರುದ್ಧ...

BIG NEWS: ಗುಡ್ಡ ಕುಸಿದು ಮೂವರ ಸಾವು ಪ್ರಕರಣ: ಅವೈಜ್ಞಾನಿಕ ಕಾಮಗಾರಿ ಕಾರಣ: ಅಧಿಕಾರಿಗಳ ವಿರುದ್ಧ ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಉರುಮನೆ ಕೋಡಿಯಲ್ಲಿ ಗುಡ್ಡ ಕುಸಿತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣ ಸಂಬಂಧ ಅವೈಜ್ಞಾನಿಕ ಕಾಮಗಾರಿ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ.

ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಯೇ ಗುಡ್ಡ ಕುಸಿತಕ್ಕೆ ಕಾರಣ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗುಡ್ದ ಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ಗಾಯಾಳು ಅಶ್ವಿನಿ ಸಹೋದರ ತೇಜುಕುಮಾರ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಂಜನಾಡಿ ಗ್ರಾಮ ಪಂಚಾಯತ್ ಪಿಡಿಒ ಚೈತ್ರಾ, ಕೆಆರ್ ಡಿಐಎಲ್ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಇಂಜಿನಿಯರ್ ಗಳು ಕಾರಣ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106ರಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular