ಬೆಂಗಳೂರು : ರಾಜ್ಯದಲ್ಲಿ 5770 ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಾಜ್ಯದಲ್ಲಿ 5,895 ಅರಿವು ಕೇಂದ್ರಗಳಿದ್ದು, 5,770 ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಪಂಚಾಯಿತಿ ಗ್ರಂಥಾಲಯಗಳಲ್ಲಿ 50.62 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಳಕ್ಕೆ ಅರಿವು ಕೇಂದ್ರಗಳು ನೆರವಾಗುತ್ತಿವೆ. ಹಲವು ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ತೇರ್ಗಡೆಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ eತಿಳಿಸಿದ್ದಾರೆ.

