HomeLatest NewsBIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ: DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ:...

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ: DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿಗಳ, ಸಿಇಒ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಎರಡನೇ ದಿನದ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು. ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular