HomeLatest NewsBREAKING : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟಕ್ಕೆ ಇದುವರೆಗೆ 67 ಮಂದಿ ಬಲಿ :...

BREAKING : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟಕ್ಕೆ ಇದುವರೆಗೆ 67 ಮಂದಿ ಬಲಿ : ರಾಜ್ಯ ಸರ್ಕಾರ ಮಾಹಿತಿ.!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟಿಸಿದ್ದು, ಇದುವರೆಗೆ 67 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಡಿಲು ಬಡಿದು, ಗುಡ್ಡ ಕುಸಿದು ಹಾಗೂ ವಿವಿಧ ಕಾರಣಗಳಿಂದ ಮೃತಪಟ್ಟವರ ಸಂಖ್ಯೆ 67 ಕ್ಕೇರಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಅಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

125 ವರ್ಷಗಳಲ್ಲಿಯೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಅತಿ ಹೆಚ್ಚು ಮಳೆ ಕರ್ನಾಟಕದಲ್ಲಿ ಆಗಿದ್ದು, ಬರೋಬ್ಬರಿ 67 ಜನರನ್ನು ಬಲಿ ಪಡೆದಿದೆ. ಕರಾವಳಿ ಜಿಲ್ಲೆಗಳು ವರುಣಾರ್ಭಟಕ್ಕೆ ಅಕಶರಶಃ ನಲುಗಿ ಹೋಗಿವೆ.
ಭೂ ಕುಸಿತ, ಗುಡ್ಡ ಕುಸಿತ, ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಒಂದರ ಹಿಂದೊಂದರಂತೆ ಅನಾಹುತಗಳು ದಕ್ಷಿಣ ಕನ್ಣಡ ಜಿಲ್ಲೆಯಲ್ಲಿ ಸಂಭವಿಸುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಭಾರಿ ರಾಜ್ಯದಲ್ಲಿ ಮೇ ತಿಂಗಳಲ್ಲಿ ಸುರಿದಿರುವ ಮಳೆ ಶತಮಾನಗಳಷ್ಟು ಹಿಂದಿನ ಮಹಾಮಳೆ ಎಂದು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಿಳಿಸಿದ್ದಾರೆ. 125 ವರ್ಷಗಳಲ್ಲಿಯೇ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅಲ್ಲದೇ ಏಪ್ರಿಲ್ ನಿಂದ ಈವರೆಗೆ ರಾಜ್ಯದಲ್ಲಿ ಮಳೆ ಅನಾಹುತದಲ್ಲಿ 67 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular