HomeLatest NewsBREAKING NEWS: ರೈತರ ಪ್ರತಿಭಟನೆಯ ಕಿಚ್ಚಿಗೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ

BREAKING NEWS: ರೈತರ ಪ್ರತಿಭಟನೆಯ ಕಿಚ್ಚಿಗೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆಗೆ ವಿರೋಧಿಸಿ ರೈತರು ನಡೆಸಿದ ಪ್ರತಿಭಟನೆ, ಆಕ್ರೋಶಕ್ಕೆ ಮಣಿದ ತುಮಕೂರು ಜಿಲ್ಲಾಡಳಿತ ಕೊಲ್ನೆಗೂ ಕಾಮಗಾಅರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ತುಮಕೂರಿನ ಗುಬ್ಬಿಯಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು, ರಸ್ತೆಗೆ ಮಣ್ಣು ಸುರಿದು, ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ರೈರ ಪ್ರತಿಭಟನೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳು, ಮಠಾಧೀಶರು ಕೂಡ ಭಾಗಿಯಾಗಿದ್ದರು. ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆದೇಶ ನೀಡಿದೆ. ಹಾಗಾಗಿ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಮಗಾರಿ ಸ್ಥಗಿತಗೊಂಡರೂ ರೈತರ ಕಿಚ್ಚು ಕಡಿಮೆಯಾಗಿಲ್ಲ. ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿ, ಹಿಟಾಚಿ ಮೂಲಕ ಮಣ್ಣು ತೆಗೆದು ಕೆನಾಲ್ ಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪ್ರತಿಭಟನಾಕಾರರ ಆಕ್ರೋಶಕ್ಕೆ ಲಿಂಕಿಂಗ್ ಕೆನಾಲ್ ಧ್ವಂಸಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular