HomeLatest NewsBIG NEWS: ಮಳೆ ಅಬ್ಬರಕ್ಕೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ: 10ಕ್ಕೂ ಹೆಚ್ಚು ಮನೆಗಳು ಜಲಾವೃತ

BIG NEWS: ಮಳೆ ಅಬ್ಬರಕ್ಕೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ: 10ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದೆ. ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರ, ಅನಾಹುತಗಳು ಸಂಭವಿಸಿವೆ. ಈ ನಡುವೆ ಭಾರಿ ಮಳೆಗೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕವೇ ಸಂಪೂರ್ಣ ಕಡಿತಗೊಂಡಿದೆ.

ರಸ್ತೆಗಳಲ್ಲಿ ಪ್ರವಾಹದಂತೆ ನೀರು ಹರಿಯುತ್ತಿದ್ದು, ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಭಾಗದ ಪ್ರದೇಶ ಸಂಪೂರ್ಣ ನದಿಯಂತಾಗಿದ್ದು, 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಮನೆಯಲ್ಲಿದ್ದ ಕುಟುಂಬಗಳು ರಕ್ಷಣೆಗಾಗಿ ಮೊರೆಯಿಟ್ಟಿವೆ.

ಎನ್ ಡಿಆರ್ ಎಫ್ ತಂಡ ರಕ್ಷಣೆಗೆ ಧಾವಿಸಿದ್ದು, ಮನೆಯಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular