BIG NEWS: ಬೆಂಗಳೂರು –ವಿಜಯಪುರ ಪ್ರಯಾಣ ಅವಧಿ 10 ಗಂಟೆಗೆ ಇಳಿಕೆ: ರೈಲ್ವೇ ಸಚಿವ ಸೋಮಣ್ಣರೊಂದಿಗೆ ಸಚಿವ ಎಂ.ಬಿ. ಪಾಟೀಲ್ ಚರ್ಚೆ

ಬೆಂಗಳೂರು: ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 10ಗಂಟೆಗೆ ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 10ಗಂಟೆಗೆ ಇಳಿಸುವ ಸಂಬಂಧ ಕೇಂದ್ರ ಸಚಿವ ವಿ. ಸೋಮಣ್ಣ ಜತೆ ಮಾತುಕತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಮಾತುಕತೆ ನಡೆಸಿದ್ದಾರೆ.

ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು ಹತ್ತು ಗಂಟೆಗಳಿಗೆ ಇಳಿಸುವ ಸಂಬಂಧ ವಿ. ಸೋಮಣ್ಣ ಅವರೊಂದಿಗೆ ಇಂದು ದೂರವಾಣಿಯಲ್ಲಿ ಮಾತನಾಡಿದೆ.

ಈಗ ವಿಜಯಪುರ, ಬಾಗಲಕೋಟೆಗೆ ಹೋಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗಿನಲ್ಲಿ ಎಂಜಿನ್ ಬದಲಿಸಿಕೊಳ್ಳಲು ಗಂಟೆಗಟ್ಟಲೆ ನಿಲ್ಲಬೇಕಾಗಿದೆ. ಎರಡೂ ಕಡೆ ಬೈಪಾಸ್ ಮೂಲಕ ರೈಲುಗಳು ಸಾಗಿಹೋಗುವ ವ್ಯವಸ್ಥೆ ಆಗಬೇಕು. ಇದರಿಂದ ಗದಗ ಭಾಗದ ಜನತೆಗೂ ಅನುಕೂಲವಾಗುತ್ತದೆ. ಒಂದು ವೇಳೆ ಈಗಾಗಲೇ ಓಡುತ್ತಿರುವ ರೈಲುಗಳನ್ನು ಬೈಪಾಸ್ ಮೂಲಕ ಓಡಿಸುವುದು ಅಸಾಧ್ಯವಾದರೆ, ಹೊಸ ರೈಲುಗಳ ಸೇವೆಯನ್ನಾದರೂ ಆರಂಭಿಸಬೇಕು ಎಂದು ಕೇಳಿದ್ದು, ಸೋಮಣ್ಣನವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಶೀಘ್ರದಲ್ಲೇ ದೆಹಲಿಗೆ ತೆರಳುವ ಯೋಚನೆಯಿದ್ದು, ಸೋಮಣ್ಣನವರನ್ನು ಭೇಟಿ ಮಾಡಿ, ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ನಮ್ಮ ಈ ಪ್ರಸ್ತಾಪವನ್ನು ಮುಂದಿನ ಹಂತಕ್ಕೆ ಒಯ್ಯಲಾಗುವುದು ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read