HomeLatest Newsಕಾರ್ಮಿಕರ ರಾಜ್ಯ ವಿಮಾ ನಿಗಮ ಚಂದಾದಾರರಿಗೆ ಗುಡ್ ನ್ಯೂಸ್: ಖಾಸಗಿ ಆಸ್ಪತ್ರೆಯಲ್ಲೂ ನಗದು ರಹಿತ ಚಿಕಿತ್ಸೆ...

ಕಾರ್ಮಿಕರ ರಾಜ್ಯ ವಿಮಾ ನಿಗಮ ಚಂದಾದಾರರಿಗೆ ಗುಡ್ ನ್ಯೂಸ್: ಖಾಸಗಿ ಆಸ್ಪತ್ರೆಯಲ್ಲೂ ನಗದು ರಹಿತ ಚಿಕಿತ್ಸೆ ಲಭ್ಯ

ಬೆಂಗಳೂರು; ಕಾರ್ಮಿಕರ ರಾಜ್ಯ ವಿಮಾ ನಿಗಮ(ಇಎಸ್ಐಸಿ) ಚಂದಾದಾರರು ಮತ್ತು ಅವರ ಕುಟುಂಬ ಸದಸ್ಯರು ಖಾಸಗಿ ಆಸ್ಪತ್ರೆಗಳಲ್ಲೂ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದೆ.

ಕೇಂದ್ರ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಮಾಹಿತಿ ನೀಡಿದ್ದು, ಇಎಸ್ಐಸಿ ಚಂದಾದಾರರು ಹಾಗೂ ಅವರ ಕುಟುಂಬದವರು ಆಯುಷ್ಮಾನ್ ಆರೋಗ್ಯ ಯೋಜನೆ ಅಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಸೌಲಭ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲಿಯೂ ಇಎಸ್ಐ ಆಸ್ಪತ್ರೆ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ತಜ್ಞ ವೈದ್ಯರ ಕೊರತೆ ಇರುವುದರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿಯೂ ಇಎಸ್ಐಸಿ ಚಂದಾದಾರರು ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಚಿಕಿತ್ಸೆಯ ವೆಚ್ಚವನ್ನು ಕಾರ್ಮಿಕರ ರಾಜ್ಯ ವಿಮಾ ನಿಗಮ ಭರಿಸಲಿದೆ. ಈ ಕುರಿತು ನಿಯಮಗಳಲ್ಲಿ ಶೀಘ್ರವೇ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular