HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಿವಮೊಗ್ಗ ಏರ್ಪೋರ್ಟ್ ನಲ್ಲಿ ವಾಯುಯಾನ ತರಬೇತಿ ಸಂಸ್ಥೆ ಸ್ಥಾಪನೆ: ರಾಜ್ಯದವರಿಗೆ ಶೇ....

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಿವಮೊಗ್ಗ ಏರ್ಪೋರ್ಟ್ ನಲ್ಲಿ ವಾಯುಯಾನ ತರಬೇತಿ ಸಂಸ್ಥೆ ಸ್ಥಾಪನೆ: ರಾಜ್ಯದವರಿಗೆ ಶೇ. 25ರಷ್ಟು ಸೀಟು, ರಿಯಾಯಿತಿ ಶುಲ್ಕ

ಬೆಂಗಳೂರು: KSIIDC ವತಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಾಯುಯಾನ ತರಬೇತಿ ಸಂಸ್ಥೆ ಸ್ಥಾಪನೆ ಮಾಡಲಾಗುವುದು.

ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯಾಭಿವೃದ್ಧಿ ನಿಗಮದ(KSIIDC) ವತಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಾಯುಯಾನ ತರಬೇತಿ ಸಂಸ್ಥೆ (FTO) ಸ್ಥಾಪಿಸಲಾಗುತ್ತಿರುವುದನ್ನು ಘೋಷಿಸಲು ಹೆಮ್ಮೆ ಎನಿಸುತ್ತದೆ ಎಂದು ತಿಳಿಸಿದ್ದಾರೆ.

 100 ಕೆಡೆಟ್ ಗಳಿಗೆ ಪೈಲೆಟ್ ತರಬೇತಿ ನೀಡುವ ಗುರಿಯೊಂದಿಗೆ ವಾಯುಯಾನ ತರಬೇತಿ ಸಂಸ್ಥೆ (FTO) ಆರಂಭಿಸುತ್ತಿದ್ದು ಮೊದಲ ವರ್ಷ 50 ಶಿಕ್ಷಾರ್ಥಿಗಳಿಗೆ ತರಬೇತಿ ನೀಡಲಾಗುವುದು. ಕರ್ನಾಟಕದ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಶುಲ್ಕ ರಿಯಾಯಿತಿಯೊಂದಿಗೆ ಶೇ. 25 ಪ್ರವೇಶವನ್ನು ಕಾಯ್ದಿರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಈ ಸಂಸ್ಥೆಯಲ್ಲಿ ವಿಮಾನಗಳ ಹ್ಯಾಂಗರ್‌ಗಳು, ಸಿಮ್ಯುಲೇಟರ್‌ಗಳು, ಗ್ರಂಥಾಲಯ, ರೇಡಿಯೋ ಟೆಲಿಫೋನಿ ತರಬೇತಿ ಕೇಂದ್ರ ಸೇರಿದಂತೆ ಹಲವಾರು ಸೌಲಭ್ಯಗಳು ಇರುತ್ತವೆ.  ಈ ಸಂಬಂಧ ಟೆಂಡರ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಈ ಯೋಜನೆಯ ಮೂಲಕ ಸ್ವಾವಲಂಬಿ ವಾಯುಯಾನ ತರಬೇತಿ ವ್ಯವಸ್ಥೆ ನಿರ್ಮಿಸಲು ಮತ್ತು ಕೌಶಲ್ಯಪೂರ್ಣ ಪ್ರತಿಭೆಗಳನ್ನು ಉತ್ತೇಜಿಸಲು ಕರ್ನಾಟಕ ಮತ್ತೊಂದು ಮಹತ್ವದ ಹೆಜ್ಜೆ ಇಡುತ್ತಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular