HomeLatest NewsSHOCKING: ಮೆಡಿಕಲ್ ಶಾಪ್ ಗಳಲ್ಲೂ ಡ್ರಗ್ಸ್, ಚಾಕೋಲೇಟ್ ರೀತಿಯಲ್ಲೂ ಸೇವನೆ: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಬಗ್ಗೆ...

SHOCKING: ಮೆಡಿಕಲ್ ಶಾಪ್ ಗಳಲ್ಲೂ ಡ್ರಗ್ಸ್, ಚಾಕೋಲೇಟ್ ರೀತಿಯಲ್ಲೂ ಸೇವನೆ: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಬಗ್ಗೆ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ಮೆಡಿಕಲ್ ಶಾಪ್ ಸೇರಿ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಅಂತಹವರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಸಲಹೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎರಡು ದಿನ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಮೆಡಿಕಲ್ ಶಾಪ್ ಸೇರಿ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಅಂತಹವರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಸಲಹೆ ನೀಡಿದ್ದೇನೆ. ಚಾಕೋಲೇಟ್ ಸೇರಿದಂತೆ ಹಲವು ರೀತಿಯಲ್ಲಿ ಡ್ರಗ್ಸ್ ಸೇವನೆ ನಡೆಯುತ್ತಿದೆ. ಈ ಬಗ್ಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಗರ್ ಹುಕುಂ ಅರ್ಜಿಗಳನ್ನು ಕೂಡಲೇ ಇತ್ಯರ್ಥ ಪಡಿಸಬೇಕು, ಅಧಿಕಾರಿಗಳು ರೈತರ ಮನವಿಗಳನ್ನು ತ್ವರಿತವಾಗಿ ಗಮನ ಹರಿಸಿ ಬಗೆಹರಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೊಟ್ಟೆ ಸೇರಿ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿದ್ದರೂ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಒಂದರಿಂದ ಒಂದೂವರೆ ಲಕ್ಷ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

 ಕೊರೋನಾ ಸೋಂಕಿನ ಬಗ್ಗೆ ಜನ ಎಚ್ಚರಿಕೆಯಿಂದ ಇರಬೇಕು. ಇದು ಅಷ್ಟ ಅಷ್ಟು ಅಪಾಯಕಾರಿಯಲ್ಲ. ಆದರೆ, ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular