ಬೆಳಗಾವಿ: ಬೆಳಗಾವಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ದೂರು ದಾಖಲಾದ ೨೪ಗಂಟೆಯೊಳಗೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಕಮಿಷ್ನರ್ ಭುಷಣ್ ಗುಲಾಬರಾವ್ ಬೋರಸೆ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನಿನ ಸಂಘರಷಕ್ಕೆ ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾಗಿರುವ ಮತ್ತೋರ್ವನಿಗೆ ಹುಡುಕಾಟ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ದೂರು ದಾಖಲಾದ 24 ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು.
ಸಂತ್ರಸ್ತೆ ಹಾಗೂ ಆರೋಪಿಗಳು ಬೆಳಗಾವಿಯವರೇ ಆಗಿದ್ದಾರೆ. ಮೊದಲಿಗೆ ಓರ್ವ ಆರೋಪಿ, ಬಾಲಕಿಗೆ ಪರಿಚಿಯಿಸಿಕೊಂಡು ಸ್ನೇಹ ಬೆಳೆಸುತ್ತಾನೆ. ಬಳಿಕ ಆತ ಮತ್ತು ಆತನ ಸ್ನೇಹಿತರು ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ 2024ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದನ್ನು ತೋರೊಸಿ ಬ್ಲ್ಯಾಕ್ ಮೇಲ್ ಮಾಡಿ ೨೦೨೫ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.